ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀನಿವಾಸಚಾರಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಮುಷ್ಕರ
ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದರ ಮೂಲಕ ಹೊರಗುತ್ತಿಗೆದಾರರು ಸಾಂಕೇತಿಕವಾಗಿ ಮುಷ್ಕರಕ್ಕೆ ಕರೆ ನೀಡಿದ ಘಟನೆ ಇಂದಿನಿಂದ ನಡೆಯುತ್ತಿದೆ. 2019 -20, 2020-21ರ ಸಮಯದಲ್ಲಿ ಕೋವೀಡ್-19 ವಿರುದ್ಧ ಹೋರಾಟಕ್ಕಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ನಿಯೋಜನೆ ಮಾಡಿಸಿಕೊಂಡ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ…