ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು
ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…