ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet
ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…