ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :
ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ. ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…