ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet
ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…