ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ. ದೇವಾಲಯದ ಐತಿಹಾಸಿಕ ಹಿನ್ನೆಲೆ : ದೇವಸ್ಥಾನದ ಐತಿಹಾಸಿಕ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More

ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಬಸ್ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ : ಗಾಯಾಳುಗಳು ಮೆಗ್ಗಾನ್ ಗೆ ದಾಖಲು

ಆಯನೂರು ಮೆಸ್ಕಾಂ ಕಚೇರಿ ಎದುರು ನಡೆದುಕೊಂಡು ಹೋಗುತಿದ್ದ  ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರಿನ ಮೆಸ್ಕಾಂ ಕಚೇರಿ ಎದುರು ಚಾಲಕನ ನಿಯಂತ್ರಣ ಕೈತಪ್ಪಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲಾಭಕ್ಷಿ (17) ಆಯನೂರು ಸಮೀಪದ ಹೊಸೂರು ಗ್ರಾಮದವನೆಂದು ತಿಳಿದುಬಂದಿದೆ. ಸನು (16) ಎಂಬ ಯುವಕನು ಭದ್ರಾವತಿ ದಡಂಘಟ್ಟದ ಯುವಕನೆಂದು ಹಾಗೂ ಹಾರನಹಳ್ಳಿಯ ರಾಹುಲ್ (17) ಎಂಬುವರನ್ನು ಹೆಚ್ಚಿನ…

Read More

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More