ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict
ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…


