ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ
ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…