HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More