ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ
ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…