ರಿಪ್ಪನ್ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|Ripponpet
ರಿಪ್ಪನ್ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಡಾ.ಪುನಿತ್ ರಾಜ್ಕುಮಾರ್ ಅಭಿಮಾನಿ ಬಳಗ ಮಂಗಳವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್ ಅವರು ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ ನೃತ್ಯ, …