ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI
ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…


