ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…