ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ
ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…