ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ
ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…