ಅದ್ದೂರಿಯಾಗಿ ಜರುಗಿದ ನಾಗರಹಳ್ಳಿ ಜಾತ್ರಾ ಮಹೋತ್ಸವ :
ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ. ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ…


