Accident | ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ  ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೃಹತ್ ಮರದ…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ…

Read More

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ :

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ….

Read More

ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More
Exit mobile version