ಕಸ್ತೂರಿ ರಂಗನ್ ವರದಿಗೆ ತಾತ್ಕಾಲಿಕ ಬ್ರೇಕ್ : ನಿಟ್ಟುಸಿರು ಬಿಟ್ಟ ಮಲೆನಾಡಿಗರು
ಪಶ್ಚಿಮ ಘಟ್ಟ ಪ್ರದೇಶಗಳ ಜನಜೀವನದಲ್ಲಿ ಭಯ ಹುಟ್ಟಿಸಿರುವ ಡಾ. ಕೆ. ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಜಾರಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಮಿತಿಗೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ತಿಳಿಸಿದ್ದಾರೆ. ವರದಿ ಜಾರಿಗೆ ತಾತ್ಕಾಲಿತ ತಡೆ ನೀಡಲಾಗಿದೆ ಎಂದಿರುವ ಭೂಪೇಂದ್ರ ಯಾದವ್, ವಸ್ತುಸ್ಥಿತಿ ಅಧ್ಯಯನಕ್ಕೆ ಐಎಫ್‌ಎಸ್ ಅಧಿಕಾರಿ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಪಶ್ಚಿಮಘಟ್ಟ…


