ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…