ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:
ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…