ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು – ಹಿರಿಯ ಪತ್ರಕರ್ತ ಪದ್ಮರಾಜ್ ದಂಡಾವತಿ|hombuja
ರಿಪ್ಪನ್‌ಪೇಟೆ : ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ನಿರ್ಧಾರಗಳನ್ನು ದಿಢೀರ್ ತೆಗೆದುಕೊಂಡು ತಮ್ಮ ಜೀವನವನ್ನು ಕೊನೆಗಾಣಿಸುತ್ತಿರುವ ಯುವ ಸಮೂಹಕ್ಕೆ ಶ್ರೇಷ್ಠ ಗ್ರಂಥಗಳ ಅಧ್ಯಯನದ ಬಗ್ಗೆ ಜಾಗೃತಿಗೊಳಿಸುವುದು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಐದನೇ ದಿನವಾಗ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾನವನ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಧಾರ್ಮಿಕ…