Shivamogga | ಮಣ್ಣು ಕುಸಿದು ಕಾರ್ಮಿಕ ಸಾವು
ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್ಲೈನ್ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…