ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:
ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….