ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:
ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…