ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು
ಶಿಕಾರಿಪುರ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಎಂದು ಗುರುತಿಸಲಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಕೋವಿಡ್-19 ಭೀತಿ ಹಾಗೂ ಕಳೆದ ಎರಡು ವರ್ಷದ ಹಿಂದೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗಾಗಿಯೇ ಜಿಲ್ಲಾಡಳಿತ…