ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…

Read More

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಮಗಾರಿ ವೇಳೆ ಕಾರ್ಮಿಕ ಸಾವು :

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೇಳೆ ನಡೆದ ಅವಘಡ ದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಮಲ್ಲಿಕಾರ್ಜುನ (28) ಎಂದು ಗುರುತಿಸಲಾಗಿದೆ.  ಮಣ್ಣನ್ನು ಸಮತ್ತಟ್ಟು ಮಾಡುವ ವೇಳೆ ಮಣ್ಣು ಕಂಪ್ರೆಸ್ ಮಾಡುವ ಬುಲ್ಡೋಜರ್ ನಂತಹ ಮಿಷಿನ್ ಆತನ ಮೇಲೆ ಹರಿದ ಹಿನ್ನಲೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಕಾರ್ಮಿಕ ಮಲ್ಲಿಕಾರ್ಜುನ ನಿರ್ಲಕ್ಷ ತನದಿಂದ ಈ ಪ್ರಕರಣ ನಡೆದಿದೆ ಎನ್ನಲಾಗುತ್ತಿದ್ದು. ಮಲ್ಲಿಕಾರ್ಜುನ ಮೂಲತಃ ಹಾವೇರಿ ಜಿಲ್ಲೆಯವನಾಗಿದ್ದು ತನ್ನ ತಂದೆಯ ಜೊತೆ ಶಿವಮೊಗ್ಗದ ವಿಮಾನ…

Read More

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More