ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ
‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’ ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…