Headlines

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read More

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More