ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ. ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್,ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ:

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ ಸಾಗರ : ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿತಾಗಿದ್ದು ಈತನು ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ,…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More