ಜಮೀನಿಗೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನಿಂದ ತಾಲೂಕು ಕಛೇರಿ ಎದುರು ಉಪವಾಸ ಸತ್ಯಾಗ್ರಹ :
ಹೊಸನಗರ: ತಮ್ಮ ಜಮೀನಿಗೆ ತೆರಳಲು ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನೋರ್ವ ತಾಲೂಕು ಕಛೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಹೊಸನಗರ ತಾಲೂಕಿನ ಎಚ್.ಮಳವಳ್ಳಿ ನಿವಾಸಿ ಕೆ.ಯು ದಿನೇಶ್ ಅವರು, ತಮ್ಮ ಜಮೀನಿಗೆ ತೆರಳಲು ರಸ್ತೆ ಬಂದ್ ಮಾಡಲಾಗಿದೆ. ಈ ಬಗ್ಗೆ ವರ್ಷಗಳ ಕಾಲ ಹೋರಾಟ ನಡೆಸಿದರೂ ಅಧಿಕಾರಿವರ್ಗ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019ರಲ್ಲಿಯೇ ತಹಸೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ನನ್ನ ಕೃಷಿ ಜಮೀನಿಗೆ ತೆರಳುವ ದಾರಿಗೆ ಅಡ್ಡಲಾಗಿ ಗ್ರಾಮದ ಇನ್ನೋರ್ವ ಕೃಷಿಕ…