ರಿಪ್ಪನ್‌ಪೇಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪರಿಕರಗಳನ್ನು ತುಂಬಿದ್ದ ಲಾರಿ ಪಲ್ಟಿ :
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ಹೊತ್ತೊಯ್ಯುತಿದ್ದ ಲಾರಿ (KA-52 A 7483) ಕೋಡೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇


