ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :
ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…


