ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress
ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…