ನೀತಿಸಂಹಿತೆ ಉಲ್ಲಂಘನೆ – ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮೇಲೆ ಪ್ರಕರಣ ದಾಖಲು|election-code-of-coduct
ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್ ಕಾಂಗ್ರೆಸ್ನ ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಕಳೆದ ಮಾರ್ಚ್ 30 ರಂದು ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು. ಈ ಸಂಬಂಧ ಚುನಾವಣಾ ಅಧಿಕಾರಿಯಾದ ಎಸಿಯವರು ಷರತ್ತು ಬದ್ಧ ಅನುಮತಿಯನ್ನು…