ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students. ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ|moolegadde

ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಗಣಪತಿಯು ಜನಸಾಮಾನ್ಯರ ದೇವತೆ.ಗಣಪತಿ ಕೇವಲ ಒಂದು ಪಂಥದ ದೇವರಾಗದೆ ಎಲ್ಲಾ ಪಂಥದವರ ಪೂಜೆಯನ್ನು ಸ್ವೀಕರಿಸುವ ಭಗವಂತನಾದ. ಭಕ್ತರು ಗಣಪತಿಯನ್ನು ಅನೇಕ ರೂಪಗಳಲ್ಲಿ ಪೂಜಿಸುತ್ತಾ ತಮ್ಮ ಭಕ್ತಿಯ ಪರಾಕಾಷ್ಟತೆಯನ್ನು ಸಮರ್ಪಿಸುತ್ತಾ ಬಂದಿದ್ದಾರೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು.  ಮೂಲೆಗದ್ದೆ ಸದಾನಂದಶಿವಯೋಗಾಶ್ರಮದಲ್ಲಿ ಗಣೇಶ ಚತುರ್ಥಿಯಂದು ಗಣಪತಿ ಪ್ರತಿಷ್ಟಾಪನೆ ನೆರವೇರಿಸಿ ಆಶೀರ್ವಚನ ನೀಡಿ ಸ್ವಾತಂತ್ರö್ಯಕ್ಕಾಗಿ ಹೋರಾಟ ನಡೆಸುವ ಸಂದರ್ಭದಲ್ಲಿ ಜನರನ್ನು ಒಂದಡೇ ಸೇರಿಸುವ ಉದ್ದೇಶದಿಂದಾಗಿ ನಮ್ಮ ಪೂರ್ವಿಕರು ಗಣೇಶ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More
Exit mobile version