ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತರ ನಿರ್ಲಕ್ಷ : ಹಿರಿಯ ಕಾರ್ಯಕರ್ತ ಯೋಗೇಂದ್ರಪ್ಪ ಗೌಡ ಆರೋಪ
ರಿಪ್ಪನ್ ಪೇಟೆ: ಹೊಸನಗರ ತಾಲೂಕಿನಲ್ಲಿ ಕಳೆದ 35 ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷಕ್ಕೆ ಒಳಪಡಿಸಲಾಗಿದೆ. ಸರಕಾರ ಮತ್ತು ಎಲ್ಲಾ ಅಧಿಕಾರವಿದ್ದರೂ ಹಿರಿಯ ಕಾರ್ಯಕರ್ತರು ಕಡೆಗಣಿಸಿ ನಿನ್ನೆ ಮೊನ್ನೆ ಬಂದಂತಹ ಕಾಂಗ್ರೆಸ್ ಪಕ್ಷದವರಿಗೆ ಮಣೆ ಹಾಕಿ ನಾಮನಿರ್ದೇಶನ ಮಾಡಲಾಗುತ್ತಿದೆ ಆದ್ದರಿಂದ ಆಗಸ್ಟ್ 17ರ ಬುಧವಾರ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರ ಕಚೇರಿ ಎದುರು ಧರಣಿ ನಡೆಸುವುದಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಯೋಗೇಂದ್ರಪ್ಪ ಗೌಡ ರವರು ತಿಳಿಸಿದ್ದಾರೆ. ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು…