ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದ ಕಾರು !
ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಪ್ರಾರಂಭದ ಸೂರ್ಯಾಸ್ತಮ ವ್ಯೂ ಹತ್ತಿರ ಸಂಜೆ 5-15ರ ಸುಮಾರಿಗೆ ಡಸ್ಟರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿದ್ದವರು ಸದ್ಯ ಪಾರಾಗಿದ್ದಾರೆ. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಈ ಕಾರನ್ನು ಖರೀದಿಸಿದ್ದರು. ಇವತ್ತು ಕಾರನ್ನು ಖರೀದಿಸಿ ಶಿವಮೊಗ್ಗಕ್ಕೆ ತರುತ್ತಿದ್ದರು.ಕಾರಿನಲ್ಲಿ ಅರವಿಂದ್ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೂವರು…