ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.
ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ ಹಿಂದೂ ಮಹಾಸಭಾ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…


