ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :
…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್ ಕಾನ್‌ಸ್ಟೇಬಲ್ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್ ಸರ್ಕಲ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…