ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :
ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…