ಆರಗ ಜ್ಞಾನೇಂದ್ರರಿಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್
ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ. ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ…