ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ
ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…