ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:
ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…