ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…