ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance. ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ…

Read More

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More