Headlines

ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ. ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು….

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌ ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್‌…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More
Exit mobile version