ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್
ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು. ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ ರಾಜ್ಯದ ಗ್ರಾಮೀಣ ಪ್ರದೇಶದ…