ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions. ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ…

Read More

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

ರಿಪ್ಪನ್ ಪೇಟೆ : ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ :

ರಿಪ್ಪನ್ ಪೇಟೆ :  ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ  ತಿಳಿಸಿದರು. ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ  ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಶಿವಮೊಗ್ಗ : ಲೇಡೀಸ್ ನೈಟ್ ಪಾರ್ಟಿ ತಡೆದ ಭಜರಂಗದಳದ ಕಾರ್ಯಕರ್ತರು|Ladies party

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ…

Read More

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ… Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga. ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ….

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ|hombuja

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ : ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ನಿವೃತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಇಲ್ಲಿನ ಸಮೀಪದ ಹುಂಚ ಗ್ರಾಮದಲ್ಲಿ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡದ ವತಿಯಿಂದ ತೃತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಯ ಪ್ರವೇಶ ಪರೀಕ್ಷೆಯ – ಉಚಿತ…

Read More