ಹೈಕಮಾಂಡ್ ಬುಲಾವ್ ಹಿನ್ನಲೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಡೀರ್ ದೆಹಲಿಗೆ : ಕೈ ತಪ್ಪುತ್ತಾ ಗೃಹ ಸಚಿವ ಸ್ಥಾನ ??????
ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ಪುನರ್ ರಚನೆಯ ವೇಳೆ ಗೃಹ ಸಚಿವರ ಕುರ್ಚಿ ಅಲುಗಾಡುವ…


