ರಿಪ್ಪನ್ ಪೇಟೆ ಯಲ್ಲಿ ಶುಕ್ರವಾರ ಡಾ. ಶಿವಕುಮಾರ ಮಹಾಸ್ವಾಮಿಗಳವರ 115ನೇ ವರ್ಷದ ಜನ್ಮದಿನಾಚರಣೆ:
ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು ಏಪ್ರಿಲ್ 1 ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ…


